×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2022-23

 ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉಡುಪಿ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಗೊಂಡಿತು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ನಡೆದಿರುವ ಈ ಕ್ರೀಡಾಕೂಟದಲ್ಲಿ  ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್, ಗಣಿತನಗರ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ, ಕ್ರೀಡಾ ಸಂಯೋಜಕರು, ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ದಿನೇಶ್ ಕುಮಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *