×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಡಿಸೆಂಬರ್ 16,17,18, ಕಾಪು ಬೀಚ್ ಉತ್ಸವ ಕಡಲ ಐಸಿರ 2022

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡುವಿನಲ್ಲಿ, ದಿ ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ತಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಡಿಸೆಂಬರ್ 16,17,18 ರಂದು ಜರಗಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹೊರ ಜಿಲ್ಲೆಯ ವಲಸೆ ಕಾರ್ಮಿಕರ ಮತ್ತು ನಮ್ಮೂರ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಶಾಲಾ ವಾಹನ, ಚಿಲ್ಡನ್ಸ್ ಪಾರ್ಕ್ ಕೊಡುಗೆಯಾಗಿ ಹಸ್ತಾಂತರಿಸಲಾಗಿದೆ. ಮತ್ತು ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳು ಕಾಪು ಕಡಲ ಕಿನಾರೆಯಲ್ಲಿ ಜರಗಲಿದೆ. ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ತಂಡ ಈ ಬಾರಿ ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫಲಪುಷ್ಪ  ಸ್ಪರ್ಧೆ ಕಲಾ ಸ್ಪರ್ಧೆ- ಪ್ರದರ್ಶನ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಮಹಿಳೆಯರಿಗಾಗಿ ಪ್ರೋಬಾಲ್, ಸಂಗೀತ ಕುರ್ಚಿ ಇತ್ಯಾದಿ ಸ್ಪರ್ಧೆಗಳು, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ನಗದು ಬಹುಮಾನ ಇದೆ ಎಂದರು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಶೀಲರಾಜ್ ಪುತ್ರನ್, ಉಪಾಧ್ಯಕ್ಷರಾದ ಆನಂದ ಶ್ರೀಯಾನ್, ಕಾರ್ಯದರ್ಶಿ ಸಚಿನ್‌ ಪುತ್ರನ್, ಕೋಶಾಧಿಕಾರಿ ಕುಶ ಸಾಲ್ಯಾನ್, , ನಿತೇಶ್ ಸುವರ್ಣ,  ರಾಜೇಶ್‌ ಸುವರ್ಣ ದಿನೇಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *