×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದ ನಾಲ್ವರು ವಿದ್ಯಾರ್ಥಿಗಳು ಅಮಾನತು

ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ಡ್ಯಾನ್ಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ವಿವಾದದ ಸ್ವರೂಪ ಪಡೆದುಕೊಳ್ಳುವ ಹಂತದಲ್ಲಿರುವಾಗಲೇ ಎಚ್ಚೆತ್ತಿರುವ ಕಾಲೇಜು ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿರುವ ವಿಷಯವನ್ನು ತಿಳಿಸಿದೆ. ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನೀಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡ್ಯಾನ್ಸ್​ ಮಾಡಿದ್ದರು. ಈ ಸಂಬಂಧ ವಿಚಾರಣೆ ಪೂರ್ಣವಾಗುವರೆಗೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಕಾಲೇಜು ಕಾರ್ಯಕ್ರಮದ ಪಟ್ಟಿಯಲ್ಲಿ ಈ ಡ್ಯಾನ್ಸ್​ ಲಿಸ್ಟ್​ ಆಗಿರಲಿಲ್ಲ. ಬುರ್ಖಾ ಧರಿಸಿ ಬಂದ ಕೆಲ ವಿದ್ಯಾರ್ಥಿಗಳು ಸಂಗೀತಕ್ಕೆ ಹೆಜ್ಜೆ ಹಾಕಿದರು. ಇದು ಅನುಮೋದಿತ ಕಾರ್ಯಕ್ರಮದ ಭಾಗವಾಗಿರಲಿಲ್ಲ. ವಿಚಾರಣೆ ಹಿನ್ನೆಲೆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ.

Leave a Reply

Your email address will not be published. Required fields are marked *