
ಬೆಂಗಳೂರಿನ ಕುಂದಲಹಳ್ಳಿ ಗೇಟ್ ಸಮೀಪ ಸಿಗರೇಟ್ ಹಣ ಕೇಳಿದಕ್ಕೆ ಉಡುಪಿ ಜಿಲ್ಲೆಯ ಬೈಂದೂರಿನ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.ಡೆಲಿವರಿ ಬಾಯ್ ಕಾರ್ತಿಕ್(20), ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಅಲ್ಯೂಮಿನಿಯಂ ವರ್ಕ್ ಮಾಡುವ ಸಲಾನ್(20) ಬಂಧಿತ ಆರೋಪಿಗಳು, ಉಡುಪಿಯ ಬೈಂದೂರು ಮೂಲದ ನವೀನ್ ಕುಮಾರ್ ಹಾಗೂ , ನಿತೀನ್ ಶೆಟ್ಟಿ ಪ್ರಜ್ವಲ್ ಶೆಟ್ಟಿ ಹಲ್ಲೆಗೊಳಗಾದವರು.ಯುವಕರಿಗೆ ಹಲ್ಲೆ ನಡೆಸಿರುವ ಆರೋಪಿಗಳ ಕೃತ್ಯ ಅಂಗಡಿಯಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.7-8 ಮಂದಿ ಅಪರಿಚಿತರು. ಟೀ ಕೇಳಿದ್ದು, ಅವರಿಗೆ ಕುಡಿಯಲು ಟೀ ಕೊಟ್ಟಿದ್ದು, ನಂತರ ಬೇಕೆಂದೇ ಕಿರಿಕಿರಿ ತೆಗೆದು ಹಣ ಕೊಡುವ ವಿಷಯದಲ್ಲಿ ತಗಾದೆ ತೆಗೆದು ಏಕಾಏಕಿ ಇಬ್ಬರೂ ಅಪರಿಚಿತರು ಅಂಗಡಿ ಒಳಗೆ ಬಂದು ಮನಬಂದಂತೆ ಪ್ಲಾಸ್ಟಿಕ್ ಕ್ರೇಟ್ ಮತ್ತು ಹೆಲೆಟ್ ಹಾಗೂ ಮುಷ್ಠಿಯಿಂದ ಅಲ್ಲದೇ ನಮ್ಮ ಅಂಗಡಿಯಲ್ಲಿದ್ದ ರಾಡ್‌ನಿಂದ ಮನಸೋ ಇಚ್ಚೆ ಥಳಿಸಿದ್ದಾರೆ.ನಂತರ ನಿತೀನ್ ಶೆಟ್ಟಿ ಪ್ರಜ್ವಲ್‌ಶೆಟ್ಟಿ, ಅವರ ಮೇಲೆಯೂ ಹಲ್ಲೆ ನಡೆಸಿ ಕಾಲಿನಿಂದ ತುಳಿದಿದ್ದಾರೆ.ಅಲ್ಲದೇ ಈ ಸಂದರ್ಭದಲ್ಲಿ ನನ್ನ ಕುತ್ತಿಗೆಯಲ್ಲಿದ್ದ 18 ಗ್ರಾಂ ತೂಕದ ಚಿನ್ನದ ಸರ, 25 ಸಾವಿರ ರೂ.ಬೆಲೆ ಬಾಳುವ ಚೈನ್ ತೆಗೆದುಕೊಂಡು ಹೋಗಿದ್ದಾರೆ. ಕಾಂಡಿಮೆಂಟ್ಸ್ ವಸ್ತುಗಳನ್ನು ಹಾಗೂ ಗ್ಲಾಸ್‌ಗಳನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿ, ಕ್ಯಾಷ್ ಬಾಕ್ಸ್‌ನಲ್ಲಿ 1. 90 ಲಕ್ಷ ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ.ಮಾತ್ರವಲ್ಲದೆ ಹೋಗುವಾಗ ಪೊಲೀಸ್‌ಗೆ ಏನಾದರೂ ದೂರು ನೀಡಿದರೆ ನಿಮ್ಮನ್ನು ಪ್ರಾಣ ಸಹಿತ ಬಿಡುವುದಿಲ್ಲ. ತಕ್ಷಣ ಊರು ಬಿಟ್ಟು ಹೋಗಬೇಕು. ಇಲ್ಲವಾದಲ್ಲಿ ನಿಮ್ಮನ್ನು ಸಾಯಿಸುತ್ತೇವೆ ಎಂದು ಜೀವ ಬೆದರಿಕೆ ಹಾಕಿರುವುದಾಗಿ ಹಲ್ಲೆಗೊಳಗಾದ ನವೀನ್ ಕುಮಾರ್ ಎಚ್ಎಎಲ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ

