×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೈಕ್ ಢಿಕ್ಕಿ ಹೊಡೆದು ಪಾದಾಚಾರಿ ಸಾವು

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಶನಿವಾರ ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಮೃತ ದುರ್ದೈವಿ. ಕಟಪಾಡಿಯಲ್ಲಿ ಪಾದಾಚಾರಿ ಸತೀಶ್‌ ರಸ್ತೆ ದಾಟುತ್ತಿರುವಾಗ ಬೈಕ್‌ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು. ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *