×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮೀನುಗಾರಿಕೆಗೆ ತೆರಳಿದ್ದ ಉಚ್ಚಿಲದ ಮಹಿಳೆಯ ಮಾಲಕತ್ವದ ದೋಣಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ.


ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಘಟಿಸಿದೆ.
ಸೋಮವಾರ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ ೭ ಮಂದಿ ಮೀನುಗಾರಿಕೆಗೆ ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಕ್ಷುದ್ರಗೊಂಡು ದೋಣಿ ಮುಳುಗಿದೆ,
ಬೇರೆ ದೋಣಿಗಳಲ್ಲಿ ಮೀನುಗಾರಿಕೆ ಮಾಡುತ್ತಿದ್ದ ದೋಣಿಯವರು ೭ ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ದೋಣಿಯಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ದೋಣಿಗೆ ಹಾನಿ ಉಂಟಾಗಿದೆ.
ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ .
ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ರವರು ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *