×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಲ್ಪೆ ಸೆಂಟ್ರಲ್ ವಾರ್ಡ್ ಕಾರ್ಯಕರ್ತರೊಂದಿಗೆ ಶಾಸಕ ರಘುಪತಿ ಭಟ್ ಸಭೆ

ಉಡುಪಿ ನಗರದ ಮಲ್ಪೆ ಸೆಂಟ್ರಲ್ ವಾರ್ಡಿನ ಕಾರ್ಯಕರ್ತರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು  ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ “ಅಟಲ್ ಉತ್ಸವ” ಡಿಸೆಂಬರ್ 24 ರಂದು ಅಟಲ್ ಟ್ರೋಫಿ ಮತ್ತು ಡಿಸೆಂಬರ್ 25 ರಂದು ನಡೆಯಲಿರುವ ಬೂತ್ ಸಂಗಮ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ಬೂತ್ ಅಧ್ಯಕ್ಷರಾದ ಧರ್ಮೇಂದ್ರ ಕೋಟ್ಯಾನ್, ಲಕ್ಷ್ಮಣ್ ಕರ್ಕೇರಾ, ಸತೀಶ್ ಜತ್ತನ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *