
ಉಡುಪಿ ನಗರದ ವಡಭಾಂಡೇಶ್ವರ ವಾರ್ಡಿನ ಕಾರ್ಯಕರ್ತರ ಸಭೆ ವಿಜಯ ಕುಂದರ್ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ವಡಭಾಂಡೇಶ್ವರ ವಾರ್ಡಿನ ಬೂತ್ ಸಂಖ್ಯೆ 171 ರ ಅಧ್ಯಕ್ಷರಾಗಿ ಕೃಷ್ಣಪ್ರಸಾದ್, ಬೂತ್ ಸಂಖ್ಯೆ 172 ರ ಅಧ್ಯಕ್ಷರಾಗಿ ಜಗದೀಶ್ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಮಾಜಿ ಪ್ರಧಾನ ಮಂತ್ರಿಗಳಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ “ಅಟಲ್ ಉತ್ಸವ” ಡಿಸೆಂಬರ್ 24 ರಂದು ಅಟಲ್ ಟ್ರೋಫಿ ಮತ್ತು ಡಿಸೆಂಬರ್ 25 ರಂದು ನಡೆಯಲಿರುವ ಬೂತ್ ಸಂಗಮ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ವಿಜಯ್ ಕುಂದರ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

