
ಕಾಪು ತಾಲೂಕಿನ ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಸರಸ್ವತಿ ಮಂದಿರ ಶಾಲೆಯು ಕಲಿಕೆಯಲ್ಲಿ ಹಾಗೂ ಕ್ರೀಡೆಯಲ್ಲಿ ಹೆಸರು ಪಡೆದಿದೆ. ಎಂದರು

.ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ರವರು ಕ್ರೀಡಾ ಜ್ಯೋತಿ ಬೆಳಗಿಸಿದರು. ಪ್ರೌಢಶಾಲಾ ಸಂಚಾಲಕ ಗಂಗಾಧ ಸುವರ್ಣ ರವರು ಶಾಲಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪ್ರಾಥಮಿಕ ಶಾಲಾ ಸಂಚಾಲಕ ಮೋಹನ್ ದಾಸ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಸತೀಶ್ ಶಿಕ್ಷಣಾಧಿಕಾರಿ ಉಮಾ, ಶಶಿರೇಖಾ , ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಮಚಂದ್ರ, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಲಾವತಿ, ಸಮನ್ವಯ,, ಮುಖ್ಯ ಶಿಕ್ಷಕ ಬಾಬುರಾಯ ಆಚಾರ್ಯ, ದೈಹಿಕ ಶಿಕ್ಷಕ ಸುರೇಶ್ ಕುಲಾಲ್ ಎಎಸ್ ಐ ಗಂಗಾಧರ್, ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

