
ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಬ್ರಹ್ಮಾವರ ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ “ಕಿಶೋರ ಯಕ್ಷಗಾನ ಸಂಭ್ರಮ 2022” ಉದ್ಘಾಟನಾ ಸಮಾರಂಭ ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಿತು. ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ, ಬ್ರಹ್ಮಾವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರು ಆಯೋಜಿಸಿರುವ ಈ “ಕಿಶೋರ ಯಕ್ಷಗಾನ ಸಂಭ್ರಮ – 2022” ಬ್ರಹ್ಮಾವರದ ಬಂಟರ ಭವನದ ಬಳಿ ದಿನಾಂಕ 13-12-2022 ರಿಂದ 20-12-2022 ರ ವರೆಗೆ ಸಂಜೆ 5.30 ರಿಂದ 8.30 ರ ವರೆಗೆ ದಿನಕ್ಕೆ 2 ಪ್ರೌಢಶಾಲೆ ವಿದ್ಯಾರ್ಥಿಗಳಿಂದ 2 ಪ್ರಸಂಗಗಳಂತೆ ನಡೆಯಲಿದೆ. ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಚಂದ್ರಶೇಖರ್ ಹೆಗ್ಡೆ,ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ತಿಮ್ಮಪ್ಪ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃ ಸಂಘ, ಉಡುಪಿ ತಾಲೂಕು ಸಮಿತಿ ಸದಸ್ಯರಾದ ಭುಜಂಗ ಶೆಟ್ಟಿ, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಂಗನಾಥ್ ಕೆ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಉದ್ಯಮಿಗಳಾದ ಕರುಣಾಕರ ಹೆಗ್ಡೆ, ಆಶ್ರಯ ಹೋಟೆಲ್ ನ ರಾಜಾರಾಮ್ ಶೆಟ್ಟಿ, ಹಿರಿಯರಾದ ಭಾಸ್ಕರ್ ರೈ, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಬ್ರಹ್ಮಾವರ ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುಧೀರ್ ಕುಮಾರ್ ಶೆಟ್ಟಿ, ಕೋಶಾಧಿಕಾರಿಗಳಾದ ಕಮಲಾಕ್ಷ್ ಹೆಬ್ಬಾರ್, ಉಪಸ್ಥಿತರಿದ್ದರು. ಚೇರ್ಕಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

