×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ

ಶಿರ್ವ ಸಂತ ಮೇರಿ ಕಾಲೇಜಿನ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಶುಕ್ರವಾರ ಒಂದು ದಿನದ ಶಸ್ತ್ರ ತರಬೇತಿ ಶಿಬಿರ ನಡೆಯಿತು.
ಕಾಲೇಜು ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ , ಕ್ಯಾಡೆಟ್ ಗಳಾದ ಪೂಜಾ, ಹುಳಿದ್ರ ಖುಷಿ, ಲಾಯ್ ವಿನ್ಸ್ಟನ್ ಫರ್ನಾಂಡಿಸ್ ರವರನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಬಿಎಚ್‌ಎಂ ಮಹೇಂದ್ರ ಲಿಂಬು, ಹವಾಲ್ದಾರ್ ಪೆಶಲ್ ಬಿಡಿಆರ್ ತಮಾಂಗ್, ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮಶ್ರೀ ಸುದರ್ಶನ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ವಾಣಿ ಯು ಸಾಲಿಯಾನ್ ಸ್ವಾಗತಿಸಿ, ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್ ವಂದಿಸಿದರು. ಸೋನಾಲಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *