×
Our website is made possible by displaying online advertisements to our visitors. Please consider supporting us by whitelisting our website.
  • 9880645340

ತನ್ನ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಕಾಂಗ್ರೆಸ್ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ – ಡಿಕೆ ಸುರೇಶ್

ಕಾರ್ಕಳದ ಗಾಂಧಿ ಮೈದಾನದಲ್ಲಿ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಸ್ಮರಣಾರ್ಥ ನಡೆಯುತ್ತಿರುವ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿ, ಬೆಲೆಯೇರಿಕೆ, ಕಾಮಗಾರಿಗಳಲ್ಲಿ 40% ಕಮಿಷನ್,ಪಿಎಸ್‌ಐ ಹಗರಣ ಸಾಕಷ್ಟು ವೈಫಲ್ಯಗಳ ಸರಮಾಲೆಗಳನ್ನು ಹೊತ್ತು ರಾಜ್ಯ ಬಿಜೆಪಿ ಸರಕಾರ ಅಧಿಕಾರ ನಡೆಸುತ್ತಿದೆ. ತನ್ನ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಜನರ ದಿಕ್ಕುತಪ್ಪಿಸಲು ಕಾಂಗ್ರೆಸ್ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿಯವರು ಹೇಳಿಕೆಗಳನ್ನು ತಿರುಚುವುದರಲ್ಲಿ ಮೊದಲಿನಿಂದಲೂ ನಿಸ್ಸೀಮರು. ಪಿಎಸ್‌ಐ ಹಗರಣ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೆಲೆ ಏರಿಕೆ, ಸಾಲು ಸಾಲು ಹಗರಣಗಳನ್ನು ನಡೆಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜಕ್ಕೆ ಕೆಟ್ಟ ಹೆಸರು ಬಂದಿದೆ. ಬಿಜೆಪಿ ನಾಲ್ಕು ವರ್ಷದ ಆಡಳಿತದಲ್ಲಿ ಏನೂ ಸಾಧನೆ ಮಾಡಿಲ್ಲ. ನಮ್ಮ ಸರಕಾರ ಜನಪರ ಸರಕಾರ ಎಂದು ಬಡಾಯಿಕೊಚ್ಚಿಕೊಳ್ಳುವ ಮುಖ್ಯಮಂತ್ರಿಗಳು ಜನರ ಮುಂದೆ ಸರಕಾರದ ಸಾಧನೆಯ ಕಾರ್ಡ್ ಬಹಿರಂಗಪಡಿಸಲಿ ಎಂದು ಡಿಕೆ ಸುರೇಶ್ ಸವಾಲು ಹಾಕಿದರು. ಸರಕಾರದ ವೈಫಲ್ಯಗಳನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಬಹಿರಂಗಪಡಿಸಲಿದ್ದೇವೆ ಎಂದರು. ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳದ ಜನ ಬದಲಾವಣೆ ಬಯಸಿದ್ದು ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಸುರೇಂದ್ರ ಶೆಟ್ಟಿ, ಕೃಷ್ಣ ಶೆಟ್ಟಿ ನೀರೆ, ಶುಭದ ರಾವ್   ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *