×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಳ್ಳಾಲ : ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕ ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ತಿಳಿದು ಬಂದಿದೆ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ ‌ ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಢಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದ್ದಾನೆ. ಕಾರು ಮಾಲಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *