×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪರ್ಕಳ – ಮಣಿಪಾಲ ಮುಖ್ಯ ರಸ್ತೆಯ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ

ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಸಂಸದರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಸೂಚನೆಯಂತೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಣಿಪಾಲ – ಉಡುಪಿ ಸಂಪರ್ಕಿಸುವ ಕೆಳಪರ್ಕಳ ರಸ್ತೆ ಸರಿಪಡಿಸುವಂತೆ ತಿಳಿಸಿದ್ದರು. ಅದರಂತೆ ಕೈಗೊಂಡಿರುವ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 160 A ಇದರ ಪರ್ಕಳ ದಿಂದ ಮಣಿಪಾಲ ಸಂಪರ್ಕಿಸುವ ಮುಖ್ಯ ರಸ್ತೆಯ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಉಡುಪಿ – ಮಣಿಪಾಲ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಕೆಳಪರ್ಕಳ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ಕಷ್ಟ ಸಾಧ್ಯವಾಗಿ ಪ್ರತಿನಿತ್ಯ ವಾಹನದಟ್ಟನೆಯಿಂದ ಸಾರ್ವಜನಿಕರು ಸಂಕಷ್ಟ ಪಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ದಿನಾಂಕ ದಿನಾಂಕ 21-12-2022 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಯುವವರೆಗೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ತಿಳಿಸಿದ್ದರು.

Leave a Reply

Your email address will not be published. Required fields are marked *