×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾರು ಢಿಕ್ಕಿಯಾಗಿ ಖಾಸಗಿ ಬಸ್ ಮಾಲಕ ಸಾವು

ಕಾಪು: ಕಾಪು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ರಾತ್ರಿ ಕಾರು ಢಿಕ್ಕಿಯಾಗಿ ಬಸ್ ಮಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಕಾಪು ಮಹಾವೀರ್‌ ಬಸ್‌ನ ಮಾಲಕ, ಜೈನ ಬಸದಿ ಮನೆಯ ಮಹೇಂದ್ರ ಕುಮಾರ್‌ ಇಂದ್ರ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಸುಮಾರು 7 ಗಂಟೆ ವೇಳೆಗೆ ತಮ್ಮ ಮನೆಗೆ ಹೋಗಲು ಕಾಪು ಪೆಟ್ರೋಲ್ ಬಂಕ್ ಬಳಿ ನಿಂತಿದ್ದಾಗ ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ಮನೆ ಸಮೀಪದಲ್ಲೇ ಈ ಅಪಘಾತ ಸಂಭವಿಸಿದ್ದು, ಯಾರಿಗೂ ಅಪಘಾತ ಸಂಭವಿಸಿದೆ ಎಂದು ಅವರ ಸಹೋದರ ಜೀವಂಧರ್‍ ಅವರು ಹೆದ್ದಾರಿ ಬದಿಗೆ ಬಂದು ನೋಡಿದಾಗ ತಮ್ಮನೇ ಅಪಘಾತದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವ ವಿಷಯ ತಿಳಿಯಿತು. ತಲೆ, ಕಾಲು, ಕೈಗಳಿಗೆ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಉಡುಪಿ ಹೈಟೆಕ್ ಆಸ್ಪತ್ರೆಗೆ, ಅಲ್ಲಿಂದ ಮಣಿಪಾಲ ಕೆಎಂಸಿಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನ್ನಪ್ಪಿದರು ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮೃತರು ತಾಯಿ, ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಸಹೋದರ ಕಾಪು ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *