
ಮಂಗಳೂರು: ಈಗಾಗಲೇ ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡುಬಂದಿದ್ದು, ಜಾನುವಾರಗಳ ಸಾಗಾಟದಿಂದ ರೋಗಗ್ರಸ್ತ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗೆ ರೋಗ ಹರಡುತ್ತಿದೆ. ಈಗಾಗಲೇ 3414. ಜಾನುವಾರುಗಳು ಈ ರೋಗಕ್ಕೆ ತುತ್ತಾಗಿದ್ದು 64ಜಾನುವಾರುಗಳು ಮರಣ ಹೊಂದಿದೆ. ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ,ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಆದೇಶ ನೀಡಿದ್ದಾರೆ.

