
ಉಡುಪಿ ಜಿಲ್ಲೆಯು ರಚನೆಗೊಂಡು 25 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ಆ ನಿಟ್ಟಿನಲ್ಲಿ ಕಾಪು ಕ್ಷೇತ್ರ ವ್ಯಾಪ್ತಿಗೆ ಸಂಬಂಧಪಟ್ಟಂತೆ ಜನವರಿ ತಿಂಗಳಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಿರುವಂತೆ ಪೂರ್ವಭಾವಿ ಸಭೆಯನ್ನು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕಾಪು ಪುರಸಭೆ ಆವರಣದಲ್ಲಿ ನಡೆಯಿತು
ಈ ಸಂದರ್ಭದಲ್ಲಿ ಪೂರ್ವಭಾವಿ ಸಭೆಯಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ನಗರ ಯೋಜನಾ ನಿರ್ದೇಶಕರು ಶ್ರೀಮತಿ ಪ್ರತಿಭಾ, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ಕೆ. ಸಿ ಪೂವಯ್ಯ, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆ, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಜಯ, ಉಡುಪಿ ವಲಯ ಕ್ಷೇತ್ರ ಶಿಕ್ಷಣಧಿಕಾರಿ ಚಂದ್ರೆಗೌಡ, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷರು ಸುಧಾಮ ಶೆಟ್ಟಿ, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಕಾಪು ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಸ್ಟೀವನ್, ಕಾಪು ಪೊಲೀಸ್ ಉಪನಿರಿಕ್ಷಕರು ಶ್ರೀಶೈಲಾ ಮುರುಗೋಡ, ಹಿರಿಯಡ್ಕ ಪೊಲೀಸ್ ಉಪನಿರಿಕ್ಷಕರು ಅನಿಲ್ ಮಾದರ್, ಪಡುಬಿದ್ರೆ ಪೊಲೀಸ್ ಉಪನಿರಿಕ್ಷಕರು ಪುರುಷೋತ್ತಮ್, ಶಿರ್ವ ಪೊಲೀಸ್ ಉಪನಿರಿಕ್ಷಕರು ಅನಿಲ್, ಹಾಗೂ ಕ್ಷೇತ್ರ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿದಿಗಳು ಉಪಸ್ಥಿತರಿದ್ದರು

