×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಇಲಾಖಾಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ

ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಆರಂಭಿಸುವ ಕುರಿತು ಇಲಾಖಾಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ ರಾಷ್ಟ್ರೀಯ ಹೆದ್ದಾರಿ – 66 ರ ಕಲ್ಯಾಣಪುರ ಸಂತೆಕಟ್ಟೆ ಜಂಕ್ಷನ್ ಬಳಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಓವರ್ ಪಾಸ್ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಆರಂಭಿಸುವ ಬಗ್ಗೆ ಇಂದು ದಿನಾಂಕ 03-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರ ಸಭೆಯ ಸದಸ್ಯರಾದ ಗಿರೀಶ್ ಅಂಚನ್, ನಾಮ ನಿರ್ದೇಶಿತ ಸದಸ್ಯರಾದ ದಿನೇಶ್ ಪೈ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಉಡುಪಿ ತಹಶೀಲ್ದಾರರಾದ ಮಹೇಶ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರು ಮತ್ತು ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *