
ಮಂಗಳೂರು: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಉಲ್ಲಂಜೆ ನಿವಾಸಿ ಚರಣ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ. ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ನಂದಿನಿ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದು ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

