×
Our website is made possible by displaying online advertisements to our visitors. Please consider supporting us by whitelisting our website.
  • 9880645340

“ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ” ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಶಾಸಕ ರಘುಪತಿ ಭಟ್ ಅಭಿನಂದನೆ

ಈಡಿಗ, ಬಿಲ್ಲವ, ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ಸದರಿ ಸಮುದಾಯದವರ ಬಹುಮುಖ್ಯ ಬೇಡಿಕೆಯಾದ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ಯನ್ನು ಇಂದು ದಿನಾಂಕ 05-01-2023 ರಂದು ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿ ಮುಂದಿನ ಆಯವ್ಯದಲ್ಲಿ ಸೂಕ್ತ ಅನುದಾನವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿಂದೆ “ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ” ಸ್ಥಾಪಿಸಲಾಗಿದ್ದು, ಅದನ್ನು ಪರಿವರ್ತಿಸಿ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ರಚಿಸುವುದಾಗಿ ಘೋಷಿಸಲಾಗಿದೆ. ಬಿಲ್ಲವ ಹಾಗೂ ಈಡಿಗ ಸಮಾಜದ ಬಹುಮುಖ್ಯ ಬೇಡಿಕೆಯನ್ನು ಈಡೇರಿಸಿದ ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀಯುತ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಬಿಲ್ಲವ ಸಮಾಜದ ಸ್ವಾಮೀಜಿಗಳು ಹಾಗೂ ಮುಖಂಡರುಗಳ ನಿಯೋಗದೊಂದಿಗೆ ಇಂದು ದಿನಾಂಕ 05-01-2023 ರಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಮನವರಿಕೆ ಮಾಡಿದಾಗ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ಯನ್ನು ಘೋಷಿಸಿದರು.ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಶ್ರೀ ರೇಣುಕಾಪೀಠದ ಗುರುಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಸೋಲೂರು ಮಠದ ಆರ್ಯಶ್ರೀ ರೇಣುಕಾನಂದ ಸ್ವಾಮೀಜಿ, ಸಾಗರ ಶಾಸಕರು ಎಂ.ಎಸ್.ಐ.ಎಲ್. ನಿಗಮ ಮಂಡಳಿ ಅಧ್ಯಕ್ಷರಾದ ಹರತಾಲು ಹಾಲಪ್ಪ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್, ಭಟ್ಕಳ ಶಾಸಕರಾದ ಸುನೀಲ್ ನಾಯ್ಕ್, ಬಿಲ್ಲವ ಸಮಾಜದ ಮುಖಂಡರಾದ ಪ್ರವೀಣ್ ಪೂಜಾರಿ, ಬಿ ಎನ್ ಶಂಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *