×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಂಗಳೂರು : ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಂಸ್ಥೆಯು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಇಂದು ಸಂಜೆ ಸಂಭವಿಸಿದೆ. ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಸಂಜೆ 4:45ಕ್ಕೆ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಉಂಟಾಗಿದೆ. ಬೆಂಕಿಯ ಕೆನ್ನಾಲಿಗೆ ದಟ್ಟವಾಗಿ ಹರಡಿದ್ದು, ಸ್ಥಳದಲ್ಲಿ ಹಲವಾರು ಜನ ಸೇರಿದ್ದರು ಎನ್ನಲಾಗಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಕದ್ರಿಯಿಂದ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅವಘಡದಿಂದ ಫ್ಯಾಕ್ಟರಿಗೆ ದೊಡ್ಡ ಮೊತ್ತದ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳದವರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *