×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಶವಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ‌ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆ ಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ  ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *