
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ. ಇವರ ಸಹಭಾಗಿತ್ವದಲ್ಲಿ ನಿಟ್ಟೂರು ವಾರ್ಡಿನಲ್ಲಿ ಹೊಸದಾಗಿ ಅರಂಭಿಸುವ “ನ್ಯಾಯಬೆಲೆ ಅಂಗಡಿ” ಉದ್ಘಾಟನೆಯನ್ನು ಇಂದು ದಿನಾಂಕ 13-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿ ಸಾಂಕೇತಿಕವಾಗಿ ಪಡಿತರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ ಅಧ್ಯಕ್ಷರಾದ ಸತೀಶ್ ಕುಲಾಲ್ ಕಡಿಯಾಳಿ, ಅಹಾರ ನಿರೀಕ್ಷಕರಾದ ಸತೀಶ್ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.

