
ಉಡುಪಿ, ಜ.19: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ಮಾರಿ 66ರಲ್ಲಿ ಲಾರಿಯೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್ (60) ಮೃತ ದುದೈರ್ವಿ ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ, ಕಡೆಗ ಹೋಗುತ್ತಿದ್ದಾಗ ಸ್ಕೂಟರ್ಗೆ ಲಾರಿ ಹಿಂದಿನಿಂದ ಢಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಸಮೋಸ ಮಾರಾಟದ ವೃತ್ತಿ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆ, ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

