×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾ ರಜತ ಮಹೋತ್ಸವದ ಪ್ರಯುಕ್ತ ಆಯೋಜಿಸಿದ ಮಲ್ಪೆ ಬೀಚ್ ಉತ್ಸವ ಉದ್ಘಾಟನೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಹಮ್ಮಿಕೊಂಡಿರುವ “ಉಡುಪಿ ಜಿಲ್ಲಾ ರಜತ ಮಹೋತ್ಸವ” ಸಮಾರಂಭದ ಅಂಗವಾಗಿ  ದಿನಾಂಕ 20-01-2023 ರಿಂದ 3 ದಿನ ಮಲ್ಪೆ ಬೀಚ್ ನಲ್ಲಿ ಆಯೋಜಿಸಲಾದ “ಬೀಚ್ ಉತ್ಸವ”  ಉದ್ಘಾಟನೆಗೊಂಡಿತು. ಮೊದಲ ದಿನದ ಕಾರ್ಯಕ್ರಮವನ್ನು  ಶಾಸಕರಾದ ಕೆ. ರಘುಪತಿ ಭಟ್ ಅವರು ಗಣ್ಯರೊಂದಿಗೆ ಉದ್ಘಾಟಿಸಿದರು. ಬೀಚ್ ಉತ್ಸವದ ಪ್ರಯುಕ್ತ ಮಲ್ಪೆ ಬೀಚ್ ನಲ್ಲಿ ವಿವಿಧ ಬಗೆಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು, ಫುಡ್ ಫೆಸ್ಟ್, ಛಾಯ ಚಿತ್ರ ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಮತ್ತು ಸಂಜೆ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಚಿತ್ರಕಲಾ ಪ್ರದರ್ಶನ ಮತ್ತು ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ನೆರವೇರಿಸಲಾಯಿತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *