×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರೂ. 60 ಲಕ್ಷ ವೆಚ್ಚದಲ್ಲಿ ಇಂದ್ರಾಳಿ ಹಿಂದೂ ರುದ್ರ ಭೂಮಿ ನವೀಕರಣ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಇಂದ್ರಾಳಿ ಹಿಂದೂ ರುದ್ರ ಭೂಮಿ ನವೀಕರಣಕ್ಕೆ ನಗರ ಸಭೆಯ 2021-22ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ರೂ. 50. 00 ಲಕ್ಷ, ನಗರಸಭಾ ನಿಧಿಯಿಂದ ರೂ. 10.00 ಲಕ್ಷ ಸೇರಿದಂತೆ ಒಟ್ಟು ರೂ. 60.00 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 23-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನವೀಕೃತ ಇಂದ್ರಾಳಿ ಹಿಂದೂ ರುದ್ರ ಭೂಮಿಯ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *