×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಲ್ಪೆ – ಉದ್ಯಾವರ ನದಿಯಲ್ಲಿ ನಿರ್ಮಿಸಿರುವ ಜಟ್ಟಿಗಳು ಮತ್ತು ಮೀನುಗಾರಿಕೆ ಬಂದರಿನ ಯಾಂತ್ರಿಕ ಸ್ಲಿಪ್ ವೇ – ಸಚಿವ ಅಂಗಾರ ರೊಂದಿಗೆ ಶಾಸಕ ರಘುಪತಿ ಭಟ್ ಉದ್ಘಾಟನೆ

ಮಲ್ಪೆ – ಉದ್ಯಾವರ ನದಿಯಲ್ಲಿ ಹೊಸದಾಗಿ ನಿರ್ಮಿಸಿರುವ ಜಟ್ಟಿಗಳು ಮತ್ತು ಮೀನುಗಾರಿಕೆ ಬಂದರಿನ ಯಾಂತ್ರಿಕ ಸ್ಲಿಪ್ ವೇ ಇದರ ಉದ್ಘಾಟನೆಯನ್ನು ಇಂದು 25-01-2023 ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘ (ರಿ.) ಅಧ್ಯಕ್ಷರಾದ ದಯಾನಂದ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ್, ಉಡುಪಿ ಬಂದರು ಮತ್ತು ಮೀನುಗಾರಿಕಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಶ್ರೀನಿವಾಸ ಮೂರ್ತಿ, ಮೀನುಗಾರಿಕಾ ಇಲಾಖೆಯ ಅಪರ ನಿರ್ದೇಶಕರಾದ ಗಣೇಶ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *