
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ “ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥ “ಪುನೀತ್ ಪರ್ವ 2023” ಕಾರ್ಯಕ್ರಮವನ್ನು ಜ. 29 ರಂದು ಸಂಜೆ 5 ಗಂಟೆಗೆ ಉಡುಪಿಯ ಮಿಷನ್ ಕಂಪೌಂಡ್ ನ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದ ಇಂದಿರಾ ಗಾಂಧಿ ವೇದಿಕೆಯಲ್ಲಿ ಆಯೋಜಿಸಲಾಗಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಅಂದು ಜ.29 ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕಲರ್ಸ್ ಕನ್ನಡ ವಾಹಿನಿಯ ಮಜಾಭಾರತ ಮಜಾಭಾರತ ಖ್ಯಾತಿಯ ರಾಘವೇಂದ್ರ, ಹುಲಿ ಕಾರ್ತಿಕ್, ಜಗ್ಗಪ್ಪ ಅವರು ಭಾಗವಹಿಸಲಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ, ಶಾಲೆಗಳಿಗೆ ಸ್ಪೋರ್ಟ್ಸ್ ಕಿಟ್ ವಿತರಣೆ, ಅಂಗನವಾಡಿ ಮಕ್ಕಳಿಗೆ ಚೇರ್ ವಿತರಣೆ ನಡೆಯಲಿದೆ ಎಂದು ತಿಳಿಸಲಾಗಿದೆ.ಹಾಗೂ ಬಳಿಕ ಸಂಜೆ 7ಗಂಟೆಯಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಸಾರಥ್ಯದಲ್ಲಿ ನಟರಾಜ್ ಎಂಟರ್ಟೈನರ್ಸ್ ತಂಡದ ಕಲಾವಿದರಾದ ಸರಿಗಮಪ ಖ್ಯಾತಿಯ ಸುಹಾನ ಸೈಯದ್, ಖ್ಯಾತ ಗಾಯಕಿ ಪುಪ್ಪ ಆರಾಧ್ಯ, ಸರಿಗಮಪ ಖ್ಯಾತಿಯ ಸುಹಾನ ಸೈಯದ್, ಖ್ಯಾತ ಗಾಯಕಿ ಪುಪ್ಪ ಆರಾಧ್ಯ, ಸರಿಗಮಪ ಹಾಗೂ ಕನ್ನಡ ಕೋಗಿಲೆ ಖ್ಯಾತಿಯ ಪರುಷೋತ್ತಮ ಅವರನ್ನೊಳಗೊಂಡ “ಸಂಗೀತ ಸಂಜೆ” ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

