
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಮಟ್ಟದ “ಯಕ್ಷಗಾನ ಸಮ್ಮೇಳನ” 2023 ರ ಫೆಬ್ರವರಿ 11 ಮತ್ತು 12 ರಂದು ಎಂ.ಜಿ.ಎಂ ಮೈದಾನದಲ್ಲಿ ನಡೆಯಲಿದ್ದು, ಇದರ ಪೂರ್ವ ಸಿದ್ಧತಾ ಬಗ್ಗೆ ಇಂದು ದಿನಾಂಕ 30-01-2023 ರಂದು ನಡೆದ ಸಭೆಯಲ್ಲಿ ಶಾಸಕ ರಘುಪತಿ ಭಟ್ ರವರು ಭಾಗವಹಿಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷರಾದ ಜಿ. ಎಲ್ ಹೆಗ್ಡೆ, ಪ್ರಧಾನ ಸಂಚಾಲಕರಾದ ಮುರಳಿ ಕಡೆಕಾರ್, ಪಿ. ಕಿಶನ್ ಹೆಗ್ಡೆ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಯ ಮೊಕ್ತೇಸರರಾದ ಧನಂಜಯ್ ಶೆಟ್ಟಿ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಎಂ.ಎಲ್ ಸಾಮಗ, ಸಮಿತಿ ಸದಸ್ಯರಾದ ನಾರಾಯಣ ಎಂ. ಹೆಗ್ಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಜಂಟಿ ನಿರ್ದೇಶಕರಾದ ಅಶೋಕ್ ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರಿನ ಜಂಟಿ ನಿರ್ದೇಶಕರಾದ ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರಿನ ರಾಜೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.

