×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಹುತಾತ್ಮರ ದಿನಾಚರಣೆ

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿ ಮುಂದೆ ಹುತಾತ್ಮರ ದಿನಾಚರಣೆ ಪ್ರಯುಕ್ತ ಮಹಾತ್ಮಾಗಾಂಧೀಜಿಗೆ ಗೌರವ ನಮನ ಸಲ್ಲಿಸಲಾಯಿತು.ಜಿಲ್ಲಾ ಕಾಂಗ್ರೆಸ್ ನಾಯಕರು ಬಾಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ವೇಳೆ ಮಾತನಾಡಿದ ಮುಖಂಡ ಎಂ.ಎ ಗಫೂರ್, ಮಹತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಹಲವು ಪಾದಯಾತ್ರೆಗಳನ್ನು ಮಾಡಿ ಈ ದೇಶವನ್ನು ಜೋಡಿಸಲು ಶ್ರಮ ಪಟ್ಟರು. ಇವತ್ತು ರಾಹುಲ್ ಗಾಂಧಿಯವರು ಭಾರತ್ ಜೋಡೋ ಪಾದಯಾತ್ರೆ ಮೂಲಕ ದೇಶವಾಸಿಗಳನ್ನು ಬೆಸೆಯುವ ಕಾರ್ಯ ಮಾಡುತ್ತಿದ್ದಾರೆ.ಭವಿಷ್ಯದಲ್ಲಿ ಅವರ ಈ ಪಾದಯಾತ್ರೆ ದೇಶ ನಿರ್ಮಾಣದಲ್ಲಿ ಸಹಕಾರಿ ಆಗಲಿದೆ ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಖ್ಯಾತ್ ಶೆಟ್ಟಿ ದಿನೇಶ್ ಪುತ್ರನ್  ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *