×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಜೂರು ಕರಂದಾಡಿ- ಹಳೆವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ನ್ಯಾಯವಾದಿ ಸಂಕಪ್ಪರವರಿಗೆ ಸನ್ಮಾನ

ಕಾಪು ತಾಲೂಕಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಂಪನ್ನಗೊಂಡಿತು.ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು  ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನ್ಯಾಯವಾದಿ ಸಂಕಪ್ಪ ಅವರನ್ನು  ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ನ್ಯಾಯವಾದಿ ಸಂಕಪ್ಪ ಎ ಮಜೂರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷ ಕೆ ಲೀಲಾದರ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ವಾಸುದೇವರಾವ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಶ್ಯಾನುಬೋಗ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಶಾಲಾ ಮುಖ್ಯೋಪಾಧ್ಯಾಯ ಆರ್ ಎಸ್ ಕಲ್ಲೂರಾ, ಎಂ. ಕೆ. ಅಬ್ದುಲ್ ರಹಮಾನ್ ಸಖಾಫಿ, ರಾಜಶೇಖರ್ ರಾವ್, ಇಬ್ರಾಹಿಂ ಕರಂದಾಡಿ, ಮೊಹಮ್ಮದ್ ಸಾಹಿಲ್ ಮತ್ತಿತರರು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿಗಳಿಂದ “ಪಿರ ಬರುವೊಲಾ” ತುಳು ಹಾಸ್ಯಮಯ ನಾಟಕ ನಡೆಯಿತು.

Leave a Reply

Your email address will not be published. Required fields are marked *