
ಮಂಗಳೂರು: ಚಿನ್ನದ ಅಂಗಡಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ನಗರದ ಹಂಪನಕಟ್ಟೆಯ ಬಳಿ ನಡೆದಿದೆ. ಹಂಪನಕಟ್ಟೆದಲ್ಲಿರುವ ಜುವೆಲರಿ ಶಾಪ್‌ನಲ್ಲಿ ಕೆಲಸಕ್ಕಿದ್ದ ರಾಘವ(50) ಮೃತಪಟ್ಟಿದ್ದಾನೆ. ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುದಾರಿ ದುಷ್ಕರ್ಮಿಗಳು ಜುವೆಲರಿ ಶಾಪ್‌ಗೆ ನುಗ್ಗಿ ರಾಘವಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಾಘವ ಅವರು ಗೋಲ್ಡ್ ಪ್ಯಾಲೆಸ್ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅವರು ಮಂಗಳೂರು ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ, ಪತ್ನಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

