×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ, ಮಹಿಳೆ ಮೃತ್ಯು.

ಬೆಳ್ತಂಗಡಿ: ಮುಂಡಾಜೆ ಕಾಪು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತ ಮಹಿಳೆ ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ ಎಂದು ತಿಳಿದು ಬಂದಿದೆ.ತಡ ರಾತ್ರಿ 11 ಗಂಟೆ ಸುಮಾರಿಗೆ ಮುಂಡಾಜೆಯಿಂದ ಕಕ್ಕಿಂಜೆ ಕಡೆಗೆ ಹೋಗುತ್ತಿದ್ದ ರಿಕ್ಷಾ, ಕಾಪು ಚಡಾವು ಹತ್ತಿರ ಚಾಲಕನ ನಿಯಂತ್ರಣ ಕಳೆದು ಕೊಂಡು ನದಿಗೆ ಉರುಳಿ ಬಿದ್ದಿದೆ. ಕಿಂಡಿಅಣೆಕಟ್ಟುಗಳಲ್ಲಿ ನೀರು ನಿಂತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು ಎನ್ನಲಾಗಿದೆ. ಈ ವೇಳೆ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳದ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *