
ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಕುಡಿತದ ಮತ್ತಿನಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ತೊಟ್ನಗುರಿ ಬಳಿ ನಡೆದಿದೆ. ತೊಟ್ನಗುರಿ ನಿವಾಸಿ ರಾಜು(45) ತನ್ನ ಮನೆ ಸಮೀಪದ ಬಾವಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ದೆಂದೂರಿನ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

