×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಕೆಮ್ಮಣ್ಣು ವಿನಲ್ಲಿ ವ್ಯಕ್ತಿಯ ಮೃತದೇಹ ರಸ್ತೆ ಬದಿಯಲ್ಲೇ ಎಸೆದು ಪರಾರಿ

ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ  ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ. ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ, ಅವರು ಮೃತದೇಹವನ್ನು ಉಡುಪಿ ಅಜ್ಞರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

Leave a Reply

Your email address will not be published. Required fields are marked *