
ಜಿಲ್ಲೆಯಲ್ಲಿ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿನ ಗೊಂದಲದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯಿತು. ಮಂಗಳೂರು ಉತ್ತರ ವಿಧಾನಸಭಾ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಶಾಸಕ ಮೊಹಿದೀನ್ ಭಾವ ಹಾಗೂ ಇನಾಯತ್ ಅಲಿ ಅವರು ಮಾತನಾಡಿ ಹೈಕಮಾಂಡ್ ಈರ್ವರಲ್ಲಿ ಯಾರಿಗೆ ಟಿಕೆಟ್ ನೀಡಿದರು ನಾವು ಗೆಲುವಿಗಾಗಿ ಒಗ್ಗಟ್ಟಿನಿಂದ ನಿಸ್ವಾರ್ಥವಾಗಿ ದುಡಿಯುತ್ತೇವೆ ಎನ್ನುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು. ಇದರಿಂದ ಟಿಕೆಟ್ ವಿಚಾರದಲ್ಲಿನ ಗೊಂದಲ, ಜಂಜಾಟಕ್ಕೆ ಬಹುತೇಕ ತಾರ್ಕಿಕ ಅಂತ್ಯ ಕಂಡಂತಾಗಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ .ಟಿ. ಖಾದರ್, ಕೆ.ಎಸ್ ಮೊಹಮ್ಮದ್ ಮಸೂದ್ ಡಾ.ಯೆನಪೋಯ ಅಬ್ದುಲ್ಲ ಕುಂಞ, ಸಹಿತ ಮುಸ್ಲಿಂ ಸಮುದಾಯದ ಪ್ರಮುಖ ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.

