×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಿದ್ದಾಪುರ ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಮಾವೇಶ

ಬಿಜೆಪಿಯವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ಸುಳ್ಳು ಮತ್ತು ಸಾವಿನ ರಾಜಕಾರಣ. ದೇಶದ ಜನತೆಗೆ ಸುಳ್ಳು ಹೇಳುವ ಮೂಲಕ ಬಿಜೆಪಿ ಅಧಿಕಾರ ನಡೆಸುತ್ತಿದೆ. ಕರ್ನಾಟಕದಲ್ಲಿ ಶಾಸಕರನ್ನು ಖರಿದಿಸಿದ ಅನೈತಿಕ ಸರಕಾರ ಇದ್ದು, ಜಾತಿ ಮತ್ತು ಧರ್ಮದ ಆಧಾರದಲ್ಲಿ ಅಧಿಕಾರ ನಡೆಸುತ್ತಿದೆ.ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದರು.ಅವರು ಕಾಂಗ್ರೆಸ್ ಪಕ್ಷದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಬೃಹತ್ ಸಮಾವೇಶವನ್ನು ಶುಕ್ರವಾರ ಸಿದ್ದಾಪುರ ಪೇಟೆಯಲ್ಲಿ ಉದ್ಘಾಟಿಸಿ ಮಾತನಾಡಿದರು.ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಬೈಂದೂರು ಕ್ಷೇತ್ರದಲ್ಲಿ ಸುಳ್ಳಿನ ಸರಮಾಲೆಯ ಮೂಲಕ ಜನರಿಗೆ ದ್ರೋಹ ಬಗೆದು ಗೆದ್ದು ಬಂದಿದ್ದಾರೆ. ಕಳೆದ ಚುನಾವಣೆಯಲ್ಲಿ ನೀಡಿದ ಯಾವುದೇ ಭರವಸೆ ಈಡೇರಿಸಿಲ್ಲ. ನಾನು ಗುದ್ದಲಿ ಪೂಜೆ ಮಾಡಿದ್ದನ್ನು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಪುನಃ ಗುದ್ದಲಿ ಪೂಜೆ ಮಾಡಿದ್ದಾರೆ. ಅವರು ಮಾಡಿದ ಕೆಲಸಗಳು ಕೇವಲ ಪರ್ಸಂಟೇಜ್ ಅಭಿವೃದ್ಧಿ ಕೆಲಸಗಳಾಗಿವೆ ಎಂದರು. ಮಾಜಿ ಸಚಿವ ವಿನಯಕುಮಾರ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್  ಕೆಪಿಸಿಸಿ ವಕ್ತಾರ ಸುಧೀರ ಕುಮಾರ್ ಮುರಳಿ, , ದಿನೇಶ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ಬಿಸ್ಕಲ್‌ಕಟ್ಟೆ, ವಿಕಾಸ ಹೆಗ್ಡೆ ಬನ್ನೂರು, ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ ಬೈಂದೂರು, ರಘುರಾಮ ಶೆಟ್ಟಿ, ಎಸ್. ಸಂಜೀವ ಶೆಟ್ಟಿ ಸಂಪಿಗೇಡಿ, ವಂಡವಳ್ಳಿ ಜಯರಾಮ ಶೆಟ್ಟಿ, ದೇವಾನಂದ ಶೆಟ್ಟಿ ಹನ್ನಾಡು, ವಾಸುದೇವ ಯಡಿಯಾಳ, ಎಚ್‌. ಸುಧಾಕರ ಶೆಟ್ಟಿ ಹರ್ಕೆಬಾಳು, ನಾಗಪ್ಪ ಕೊಠಾರಿ, ಜಯರಾಮ ನಾಯ್ಕ, ಸತೀಶಕುಮಾರ ಶೆಟ್ಟಿ ಕಡಿ, ಶಂಕರನಾರಾಯಣ ಯಡಿಯಾಳ ಹಳ್ಳಿಹೊಳೆ, ಶ್ರವಣ್ ಶೆಟ್ಟಿ ಸಂಪಿಗೇಡಿ, ಶರತ್ ಕುಮಾರ ಶೆಟ್ಟಿ, ಮಾಧವ ಪೂಜಾರಿ, ಕಿರಣ್ ಹೆಗ್ಡೆ ಅಂಪಾರು, ಸದಾಶಿವ ಶೆಟ್ಟಿ ಶಂಕರನಾರಾಯಣ, ಜಿಲ್ಲಾ ಮಟ್ಟದ ಅನೇಕ ಕಾಂಗ್ರೆಸ್ ಮುಖಂಡರರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *