×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಬಸ್

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್  ಅಡಿಕೆ ತೋಟಕ್ಕೆ ಉರುಳಿ ಬಿದ್ದು ಹಲವು ಮಂದಿ ಗಾಯಗೊಂಡಿರುವ ಘಟನೆ, ವೀರಾಜಪೇಟೆ ತಾಲೂಕಿನ ಸಂಭವಿಸಿದೆ. ಅಮ್ಮತ್ತಿಯ ಕಾವಾಡಿಯಲ್ಲಿ ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂನಿಂದ ಕೊಡಗಿನ ವೀರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಫೆ. 20ರ ಮುಂಜಾನೆ 4.30 ಗಂಟೆಯ ವೇಳೆ ಬಸ್ ಕಂದಕಕ್ಕೆ ಉರುಳಿದೆ. ಚಾಲಕ ಸೇರಿದಂತೆ ಹಲವು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವೀರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *