×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಆದಿವಾಸಿ ಸಮುದಾಯ ಭವನ ಪೂತ್ತೂರು ಉಡುಪಿ ನಗರ ನೂತನ ಕಟ್ಟಡ – ಶಾಸಕ ರಘುಪತಿ ಭಟ್ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರ ಸಭೆ ಹಾಗೂ ಕೊರಗ ಸಂಘಟನೆಗಳ ಸಹಯೋಗದೊಂದಿಗೆ ಆದಿವಾಸಿ ಸಮುದಾಯ ಭವನ ಪೂತ್ತೂರು ಉಡುಪಿ ನಗರ ಇದರ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ರೂ. 3.00 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿರುತ್ತದೆ. ಈ ನೂತನ ಕಟ್ಟಡದ ಉದ್ಘಾಟನೆಯನ್ನು ಇಂದು ದಿನಾಂಕ 26-02-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳಾದ ದೂದ್ ಪೀರ್, ರಾಜ್ಯ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಗೌರಿ ಕೊರಗ, ಕೊರಗ ಸಮುದಾಯದ ಸಂಜೀವ ಕೊರಗ, ಬೊಗ್ರ ಕೊರಗ, ಗಣೇಶ್ ಕುಂದಾಪುರ, ಬಾಬು ಪಾಂಗಾಳ, ಸುಶೀಲ ನಾಡೋರಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *