×
Our website is made possible by displaying online advertisements to our visitors. Please consider supporting us by whitelisting our website.
  • 9880645340

11ನೇ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್ : ಕರ್ನಾಟಕ ಪ್ರಥಮ

ಬ್ರಹ್ಮಾವರ: ಉಳ್ಳೂರು ಮಡಿಸಾಲು ನದಿಯಲ್ಲಿ ಫೆ. 23ರಿಂದ 26ರ ವರೆಗೆ ಆಯೋಜಿಸಲಾದ 11ನೇ ರಾಷ್ಟ್ರೀಯ ಮಟ್ಟದ ಡ್ರಾಗನ್ ಬೋಟ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನ ಮತ್ತು ದಿಲ್ಲಿ ತಂಡ ದ್ವಿತೀಯ ಸ್ಥಾನ ಪಡೆದಿದೆ  ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ಕರ್ನಾಟಕ ತಂಡ ಮತ್ತು ದ್ವಿತೀಯ ಸ್ಥಾನ ಪಡೆದ ದೆಹಲಿ ತಂಡಗಳಿಗೆ ಸಂಸದರು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರೊಂದಿಗೆ ಬಹುಮಾನ ವಿತರಿಸಿ ಭಾಗವಹಿಸಿದ ತಂಡಗಳಿಗೆ ಶುಭಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಭಾರತೀಯ ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್, ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಈ “ಡ್ರ್ಯಾಗನ್ ಬೋಟ್ ಚಾಂಪಿಯನ್ಶಿಪ್” ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಭಾರತೀಯ ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರಶಾಂತ್ ಕುಶ್ವಾಹಾ, ಕಯಾಕಿಂಗ್ & ಕನೂಯಿಂಗ್ ಅಸೋಸಿಯೇಷನ್ ಆಫ್ ಕರ್ನಾಟಕದ ಅಧ್ಯಕ್ಷರಾದ ಮೇಜರ್ ಜನರಲ್ ಎಂ.ಎನ್ ದೇವಯ್ಯ, ಕಾರ್ಯದರ್ಶಿಗಳಾದ ದಿಲೀಪ್ ಕುಮಾರ್, ಭಾರತೀಯ ಡ್ರ್ಯಾಗನ್ ಬೋಟ್ ತಂಡದ ನಾಯಕರಾದ ಮಂಜೀತ್ ಸಿಂಗ್, ಡ್ರ್ಯಾಗನ್ ಬೋಟ್ ಪಂದ್ಯಾವಳಿಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ದಿನಕರ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *