×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಿಕ್ಷಾ -ಪಿಕಪ್,ನಡುವೆ ಡಿಕ್ಕಿ ಗ್ರಾ.ಪಂ.ಸದಸ್ಯೆ ಸಾವು

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಾ.ಪಂ.ಸದಸ್ಯೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ನಡೆದಿದೆ. .ಅವರು ಹೆಮ್ಮಾಡಿ ಗ್ರಾ.ಪಂ.ನ ಎರಡನೇ ವಾರ್ಡ್‌ ಆಗಿರುವ ಸಂತೋಷ್‌ನಗರ ಭಾಗದ ಸದಸ್ಯೆಯಾಗಿದ್ದರು.ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕುಸುಮಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಫೆ. 25ರ ಸಂಜೆ 4 ಗಂಟೆಯ ಸುಮಾರಿಗೆ ತ್ರಾಸಿ ಕಡೆಯಿಂದ ಕುಂದಾಪುರ ಹೆದ್ದಾರಿಯ ಕನ್ನಡಕುದ್ರು ಬಳಿ ಆಟೋ ರಿಕ್ಷಾಗೆ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ  ಪಿಕಪ್‌ ವಾಹನ ಢಿಕ್ಕಿಯಾಗಿದೆ.ಘಟನೆಯಲ್ಲಿ  ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದರು. ಇವರೊಂದಿಗಿದ್ದ ಪತಿ ಚಂದ್ರಶೇಖರ ಮೆಂಡನ್‌, ಮಕ್ಕಳಾದ ಚಿರಾಗ್‌ (17) ಹಾಗೂ ಜಾಹ್ನವಿ (15) ಗಾಯಗೊಂಡಿದ್ದರು. ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *