
ಉಡುಪಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ * ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೆವಾಲ್ ಅವರು ಮಾ. 3ರ ಬೆಳಗ್ಗೆ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ. ಕೆಪಿಸಿಸಿ ಚುನಾವಣೆ ಭರವಸೆ ಗಳಾದ “ಗೃಹಲಕ್ಷ್ಮೀ, ಗೃಹ ಜ್ಯೋತಿ’ ಯೋಜನೆಗಳ ಗ್ಯಾರಿಂಟಿ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿರುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

