×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಂಗಳೂರು ಜ್ಯುವೆಲ್ಲರಿ ಶಾಪಿಗೆ ನುಗ್ಗಿ ಸಿಬ್ಬಂದಿಯ ಹತ್ಯೆ ಪ್ರಕರಣದ ಆರೋಪಿಯ ಬಂಧನ

ಮಂಗಳೂರು: ಮಂಗಳೂರು ನಗರದಲ್ಲಿ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಸಿಬ್ಬಂದಿ ಹತ್ಯೆ ಮಾಡಿರುವ ಪ್ರಕರಣದ ಆರೋಪಿಯನ್ನು  ಬಂಧಿಸಲಾಗಿದೆ.ಈ ಕೊಲೆ ಪ್ರಕರಣ ನಡೆದ ತಿಂಗಳ ಬಳಿಕ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದ್ದು ಈತ ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್ (33) ಎಂದು ಗುರುತಿಸಲಾಗಿದೆ. ಫೆಬ್ರವರಿ 3ರಂದು ಮಂಗಳೂರಿನ ಹಂಪನ ಕಟ್ಟೆ ಜ್ಯುವೆಲ್ಲರಿ ಶಾಪ್ ನಲ್ಲಿ ಅತ್ತಾವರ ನಿವಾಸಿ ರಾಘವೇಂದ್ರ (50) ಎಂಬ ಸಿಬ್ಬಂದಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಡಿವೈಎಸ್ ಪಿ ಸುಧಾಕರನ್ ನೇತೃತ್ವದಲ್ಲಿ ಪೊಲೀಸರ ತಂಡವು ಆರೋಪಿಯನ್ನು ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಬಂಧಿಸಿದ್ದಾರೆ. ಆರೋಪಿಯು ದರೋಡೆ ಮಾಡುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಆರೋಪಿಯನ್ನು ಮಂಗಳೂರಿಗೆ ಕರೆತರಲಾಗಿದೆ.

Leave a Reply

Your email address will not be published. Required fields are marked *