×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್‌ ಬಿಡುಗಡೆ

ಕಾಂಗ್ರೆಸ್ ಪಕ್ಷದ ‘ಗ್ಯಾರಂಟಿ ಕಾರ್ಡ್‌ ಬಿಡುಗಡೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಸಭೆಯಲ್ಲಿ ಮನೆ ಮನೆಗೆ ತಲುಪಿಸಬೇಕಾದ ಕಾಂಗ್ರೆಸ್ ಪಕ್ಷದ ಚುನಾವಣಾ ‘ಗ್ಯಾರಂಟಿ ಕಾರ್ಡ್‌’ನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬಿಡುಗಡೆಗೊಳಿಸಿ ಅವರು ಮಾತನಾಡಿದರು. . ಪಕ್ಷದ ಕಾರ್ಯಕರ್ತರು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೀಡುವ 40, 000 ಗ್ಯಾರಂಟಿ ಕಾರ್ಡುಗಳನ್ನು ಪ್ರತಿ ಮನೆಮನೆಗೆ ಹಂಚಬೇಕು. ಆ ಮನೆಯ ವಿಳಾಸ ಹಾಗೂ ಸಂಪರ್ಕ ನಂಬರ್‌ಗಳನ್ನು ಪಡೆದು ಅದನ್ನು ಜಿಲ್ಲಾ ಸಮಿತಿಗೆ ನೀಡಬೇಕು.ಚುನಾವಣೆಯ ಬಳಿಕ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಾಗ ಪ್ರತಿ ಮನೆಯನ್ನು ಸಂಪರ್ಕಿಸಿ ಅವರಿಂದ ಇನ್ನಷ್ಟು ಮಾಹಿತಿ ಪಡೆಯಲಾಗುವುದು ಎಂದರು.’ಗ್ಯಾರಂಟಿ ಕಾರ್ಡ್‌ನಲ್ಲಿ ನಮೂದಿತಗೊಂಡ ಪ್ರತಿ ಮನೆಯ ಒಬ್ಬಮಹಿಳೆಯ ಬ್ಯಾಂಕ್ ಅಕೌಂಟಿಗೆ ಪ್ರತಿ ತಿಂಗಳು 2000ರೂ. ನಂತೆ ವರ್ಷಕ್ಕೆ 24, 000ರೂ. ಜಮಾ, ಪ್ರತಿ ಮನೆಗೆ ಮಾಸಿಕ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿಯೊಬ್ಬರಿಗೆ ತಿಂಗಳಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ಈ ನಡುವೆ ಪಕ್ಷದ ಯಾರೇ ಭ್ರಷ್ಟಾಚಾರದಲ್ಲಿ ತೊಡಗಿದರೆ, ಹಣ ನುಂಗಿದರೆ ಪಕ್ಷದಿಂದಲೇ ಹೊರಹಾಕಲಾಗುವುದು.’ ಎಂದು ಭರವಸೆ ನೀಡಿದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ’40 ಪರ್ಸೆಂಟ್ ಕಮಿಷನ್ ಸರಕಾರ  ಸಿಎಂ ಎಂಬ ಬ್ಯಾನರ್ ಅವರನ್ನು ಸ್ವಾಗತಿಸುತ್ತದೆ ಎಂದು ಲೇವಡಿ ಮಾಡಿದ ಸುರ್ಜೇವಾಲ, ರಾಜ್ಯದಲ್ಲಿ ಭ್ರಷ್ಟಾಚಾರ ಇಷ್ಟೊಂದು ತಾಂಡವವಾಡುತಿದ್ದರೂ, ಚುನಾವಣೆ ಸಲುವಾಗಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ನರೇಂದ್ರ ಮೋದಿಯಾಗಲೀ, ಅಮಿತ್ ಶಾ ಆಗಲಿ ಈ ಬಗ್ಗೆ ತುಟಿ ಪಿಟಕ್ಕೆನ್ನುತ್ತಿಲ್ಲ ಎಂದು ವ್ಯಂಗ್ಯವಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮೈಸೂರು ವಿಭಾಗ ಉಸ್ತುವಾರಿ ಆರ್. ಧ್ರುವನಾರಾಯಣ ಅವರು ಮಾತನಾಡಿ, ಇಂದು ಬಿಡುಗಡೆಗೊಂಡ ಗೃಹಲಕ್ಷ್ಮೀ  ಹಾಗೂ ಗೃಹಜ್ಯೋತಿ ಯೋಜನೆಗಳ ಗ್ಯಾರಂಟಿ ಕಾರ್ಡ್‌ಗಳ ಕುರಿತು ವಿವರಿಸಿ, ಅವುಗಳನ್ನು ಇದೇ ತಿಂಗಳ 10ರೊಳಗೆ ಮನೆ ಮನೆಗೆ ತಲುಪಿಸಿ ಜನರಿಗೆ ಯೋಜನೆಗಳ ಕುರಿತು ಮನವರಿಕೆ ಮಾಡಿಕೊಡುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಿದರು. ರಾಜ್ಯ ಉಪಾಧ್ಯಕ್ಷ ಮಧು ಬಂಗಾರಪ್ಪ ಅವರೂ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಉಸ್ತುವಾರಿ ರೋಝಿ ಜೋನ್, ಉಡುಪಿ ಜಿಲ್ಲಾ ಉಸ್ತುವಾರಿ ಅಭಯಚಂದ್ರ ಜೈನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಮತಾಗಟ್ಟಿ, ಗೋಪಾಲ ಪೂಜಾರಿ, ಮುಖಂಡರಾದ ಎಂ.ಎ. ಗಫೂರ, ಶ್ಯಾಮಲಾ ಭಂಡಾರಿ, ಗೀತಾ ವಾಗ್ಲೆ, ಹರೀಶ್ ಕಿಣಿ, ವೆರೋನಿಕಾ ಕರ್ನೇಲಿಯೊ, ಡಾ.ಸುನಿತಾ ಶೆಟ್ಟಿ, ಹೆರಿಯಣ್ಣ, ಬಿ.ಕುಶಲ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಳೆಬೈಲ್, ಇಸ್ಮಾಯಿಲ್ ಆತ್ರಾಡಿ, ರೋಷನ್ ಒಲಿವೆರಾ, ಅಬ್ದುಲ್ ಅಝೀಝ್, ಬಿಪಿನ್ ಚಂದ್ರ ಪಾಲ್ ನಕ್ರೆ, ನೀರೆ ಕೃಷ್ಣ ಶೆಟ್ಟಿ, ಮಂಜುನಾಥ ಪೂಜಾರಿ, ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ, ಹಬೀಬ್ ಅಲಿ, ಉದ್ಯಾವರ ನಾಗೇಶ್ ಕುಮಾರ್, ಎಲ್ಲೂರು ಶಶಿಧರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. 

Leave a Reply

Your email address will not be published. Required fields are marked *