
ಟ್ಯಾಂಕರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿ ದಂಪತಿಗಳಿಬ್ಬರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಹಜಮಾಡಿ ಸೇತುವೆ ಬಳಿ ನಡೆದಿದೆ. ಮೃತರನ್ನು ತೀರ್ಥಹಳ್ಳಿ ತಾಲೂಕು ಮುಸ್ಲಿಂ ಒಕ್ಕೂಟದ ನಿರ್ದೇಶಕರಾದ ಅಕ್ಸರ್ ಪಾಷ (62) ಹಾಗೂ ಅವರ ಪತ್ನಿ ಖತೀಜ (50) ಎಂದು ಗುರುತಿಸಲಾಗಿದೆ. ವಾಸ್‌ಪೋರ್ಟ್ ಕಚೇರಿಗೆ ಹೋಗಲೆಂದು ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಈ ಅಪಘಾತ ನಡೆದಿದೆ.ವಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

