
ಉಡುಪಿ ನಗರದ ಹಳೆ ತಾಲೂಕು ಕಚೇರಿ ಎದುರುಗಡೆಯ ರಿಕ್ಷಾ ತಂಗುದಾಣ ಮೇಲ್ಚಾವಣಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರ ಮನವಿಯಂತೆ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಕೊಡುಗೆಯಾಗಿ ನಿರ್ಮಿಸಿದ್ದು, ಇಂದು ದಿನಾಂಕ 09-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ರಿಕ್ಷಾ ತಂಗುದಾಣದ ಮೇಲ್ಚಾವಣಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ರಿಕ್ಷಾ ನಿಲ್ದಾಣದ ಅಧ್ಯಕ್ಷರಾದ ರಘುನಂದನ್, ಕಲ್ಕೂರ ಪ್ರತಿಷ್ಠಾನದ ವಿಜಯ್ ಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

