
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಸಂಸದರು, ಉಡುಪಿ ಜಿಲ್ಲಾ ಉಸ್ತುವಾರಿ ಆರ್.ಧ್ರುವನಾರಾಯಣ(61) . ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಪಕ್ಷ ನಿಷ್ಠೆಯಿಂದ ಉನ್ನತ ಸ್ಥಾನಕ್ಕೆ ಏರಿದವರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು.

