
ಕಾಪು: ಮಹಾದೇವಿ ಪ್ರೌಢಶಾಲೆ ಒಂಬತ್ತನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ್ (13) ರವರಿಗೆ ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದು ಬಾಲಕಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ಗೆ ಸಾಗಿಸುವ ಹಾದಿಯಲ್ಲಿ ಮೃತ ಪಟ್ಟ ದಾರುಣ ಘಟನೆ ಶನಿವಾರ ಬೆಳಿಗ್ಗೆ 9:00ಗೆ ನಡೆದಿದೆ ವಿದ್ಯಾರ್ಥಿನಿ ಶನಿವಾರ ಬೆಳಿಗ್ಗೆ ಶಾಲೆಗೆ ತೆರಳುತ್ತಿರುವ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೋಟೆಲ್ ಬಳಿ ರಸ್ತೆ ದಾಟವ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರಿಸಿದ್ದಾರೆ.

