
ಕಾರು ಮತ್ತು ಕಂಟೆನೈರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್ (41) ಎಂಬವರು ಸಾವಿಗೀಡಾದ ಘಟನೆ ಇಂದು ಹೊನ್ನಾವರ ಬಳಿ ನಡೆದಿದೆ. ಇಂದು ಮಧ್ಯಾಹ್ನ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಹೊನ್ನಾವರದ ಬಳಿ ಕಾರು ಕಂಟೆನೈರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅನಂತೇಶ್ ರಾವ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

