×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧ ಉದ್ಘಾಟನೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 10.00 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 23-03-2023 ರಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗವೇಣಿ, ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ., ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಸಹಾಯಕ ಆಯುಕ್ತರಾದ ರಶ್ಮಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *